Friday, 10 February 2017

ಮೂಲಭೂತ ಕರ್ತವ್ಯಗಳು


ಮೂಲಭೂತ ಕರ್ತವ್ಯಗಳನ್ನು ನಾವು ಭಾರತ ಸಂವಿಧಾನಕ್ಕೆ ಸೋವಿಯತ್ (ರಷ್ಯಾ) ಸಂವಿಧಾನದಿಂದ ಎರವಲು ಪಡೆದಿದ್ದೇವೆ. 1976ರ 42ನೇ ತಿದ್ದುಪಡಿಯ ಮೂಲಕ ಭಾರತ ಸಂವಿಧಾನಕ್ಕೆ ಮೂಲಭೂತ ಕರ್ತವ್ಯಗಳ ಪಟ್ಟಿಯನ್ನು ಸೇರಿಸಲಾಯಿತು. ಭಾರತ ಸಂವಿಧಾನದಲ್ಲಿ 4-ಎ ಭಾಗದಲ್ಲಿನ 51(ಎ) ವಿಧಿಯಡಿಯಲ್ಲಿ ಹನ್ನೊಂದು ಮೂಲಭೂತ ಕರ್ತವ್ಯಗಳನ್ನು ಕಾಣಬಹುದು.
ಅವುಗಳು ಈ ಕೆಳಗಿನಂತಿವೆ

1. ಸಂವಿಧಾನ, ರಾಷ್ಟ್ರಗೀತೆ ಮತ್ತು ರಾಷ್ಟ್ರಧ್ವಜವನ್ನು ಗೌರವಿಸುವುದು.
2. ಸ್ವಾತಂತ್ರ್ಯ ಚಳುವಳಿಯ ಉದಾತ್ತ ಆದರ್ಶಗಳನ್ನು ಪಾಲಿಸುವುದು.
3. ಭಾರತದ ಸಾರ್ವಭೌಮತೆ, ಏಕತೆ ಮತ್ತು ಸಮಗ್ರತೆಯನ್ನು ಎತ್ತಿ ಹಿಡಿಯುವುದು ಮತ್ತು ಕಾಪಾಡುವುದು.
4. ಕರೆ ಬಂದಾಗ ರಾಷ್ಟ್ರವನ್ನು ರಕ್ಷಿಸುವುದು ಮತ್ತು ದೇಶ ಸೇವೆ ಮಾಡುವುದು.
5. 6 ರಿಂದ 14 ವರ್ಷದೊಳಗಿನ ಮಕ್ಕಳನ್ನು ಪಾಲಕರು ಕಡ್ಡಾಯವಾಗಿ ಶಾಲೆಗೆ ಕಳುಹಿಸತಕ್ಕದ್ದು.
6. ನಮ್ಮ ಸಮ್ಮಿಶ್ರ ಸಂಸ್ಕøತಿಯ ಶ್ರೀಮಂತ ಪರಂಪರೆಯನ್ನು ಗೌರವಿಸುವುದು ಮತ್ತು ರಕ್ಷಿಸುವುದು.
7. ವೈಯಕ್ತಿಕ ಹಾಗೂ ಸಾಮೂಹಿಕ ಚಟುವಟಿಕೆಗಳಲ್ಲಿ ಪ್ರಾವಿಣ್ಯತೆಯನ್ನ
ು ಪ್ರದರ್ಶಿಸಿ ರಾಷ್ಟ್ರದ ಪ್ರಗತಿಗೆ ಶ್ರಮಿಸುವುದು.

8. ಮಹಿಳೆಯರ ಗೌರವಕ್ಕೆ ಚ್ಯುತಿಯುಂಟುಮಾಡುವ ಆಚರಣೆಗಳನ್ನು ತ್ಯಜಿಸುವುದು ಮತ್ತು ಭಾರತೀಯರಲ್ಲಿ ಭ್ರಾತೃತ್ವ ಮತ್ತು ಸಾಮರಸ್ಯ ಭಾವನೆಗಳನ್ನು ಬೆಳೆಸುವುದು.
9. ಅರಣ್ಯಗಳು, ಸರೋವರಗಳು, ನದಿಗಳು ಮತ್ತು ವನ್ಯಜೀವಿಗಳನ್ನು ಒಳಗೊಂಡ ನೈಸರ್ಗಿಕ ಪರಿಸರವನ್ನು ರಕ್ಷಿಸಿ, ಅಭಿವೃದ್ಧಿಪಡಿಸುವುದು.
10. ವೈಜ್ಞಾನಿಕ ಹಾಗೂ ಮಾನವೀಯ ಗುಣಗಳನ್ನು ಮತ್ತು ವಿಚಾರಣಾ ಹಾಗೂ ಸುಧಾರಣಾ ಮನೋಭಾವನೆಯನ್ನು ಬೆಳೆಸಿಕೊಳ್ಳುವುದು.
11. ಸಾರ್ವಜನಿಕ ಆಸ್ತಿಗಳನ್ನು ರಕ್ಷಿಸುವುದು ಮತ್ತು ಹಿಂಸೆ ತ್ಯಜಿಸುವುದು.

Featured post

ಕೇವಲ ಐದು ರೂಪಾಯಿಗಳಲ್ಲಿ ನಿಮ್ಮ ಕಿಡ್ನಿ ಸ್ವಚ್ಛಗೊಳಿಸಿಕೊಳ್ಳಿ!

Early Signs and Symptoms of Kidney Problems: ನೋಡಲು ಚಿಕ್ಕ ಗಾತ್ರದಲ್ಲಿದ್ದರೂ ಕೂಡ ಕಿಡ್ನಿಗಳ ಕೆಲಸ ಮಾತ್ರ ಬಹಳ ಪ್ರಮುಖವಾದದ್ದು. ಕಿಡ್ನಿಗಳ ಆರೋಗ್ಯವನ್ನು ಕಾಪ...